Tuesday, August 01, 2006

ಯಾವ ಮೋಹನ ಮುರಳಿ...

ಸಾಹಿತ್ಯ: ಗೋಪಾಲ ಕೃಷ್ಣ ಆಡಿಗ

"ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು

ಹೂವು ಹಾಸಿಗೆ ಚಂದ್ರ ಚಂದನ ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣ ಗಣದೀ ರಿಂಗಣ

ಸಪ್ತ ಸಾಗರದಾಚೆ ಎಲ್ಲೊ ಸುಪ್ತ ಸಾಗರ ಕಾದಿದೆ
ಮೊರೆಯದಲೆಗಲ ಮೂಕ ಮರ್ಮರ ಇಂದು ಇಲ್ಲಿಗು ಹಾರಿತೆ

ವಿವಶವಾಯಿತು ಪ್ರಾಣ ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ"

No comments: